ತುಮಕೂರು : ಯಾವುದೇ ‘ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ತುಮಕೂರಿನ ಬಾಲಭವನ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಶು ಮತ್ತು ಚಿಕ್ಕ ಮಕ್ಕಳ ಆಹಾರ ಪದ್ಧತಿಗಳು, ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿ ನಂತರ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರು ನಗರಕ್ಕೆ ಆಗಮಿಸಿದ ವೇಳೆ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನದಿಂದ ಬಾಲ ಮಂದಿರದವರೆಗೂ ಮಹಿಳೆಯರು ಪೂರ್ಣ ಕುಂಭ ಸ್ವಾಗತ ನೀಡಿ ಸ್ವಾಗತಿಸಿದರು. ಇದೇ ವೇಳೆ ತುಮಕೂರಿನ ಬಾಲಭವನ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಶು ಮತ್ತು ಚಿಕ್ಕ ಮಕ್ಕಳ ಆಹಾರ ಪದ್ಧತಿಗಳು, ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಯಜಮಾನಿಯರ ‘ ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದುವರೆಗೆ ಒಂದೇ ಒಂದು ಖಾತೆ ಕೂಡ ಡಿಲೀಟ್ ಆಗಿಲ್ಲ. ಯಾರು ಜಿಎಸ್ ಟಿ, ಟ್ಯಾಕ್ಸ್ ಕಟ್ಟುತ್ತಿದ್ದಾರೋ ಅವರದ್ದು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಆಗಿದೆ ಎಂದರು.ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರು ನಗರಕ್ಕೆ ಹೋಗುತ್ತಿದ್ದ ಮಾರ್ಗದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಅವರಿಗೆ ಭರ್ಜರಿ ಸ್ವಾಗತ ಕೋರಿದರು.