alex Certify BIG UPDATE : ವಿಧಾನಸೌಧದಲ್ಲಿ ‘ಪಾಕ್ ಪರ ಘೋಷಣೆ’ ಪ್ರಕರಣ : ಮೂವರು ಆರೋಪಿಗಳಿಗೆ 2 ದಿನ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ವಿಧಾನಸೌಧದಲ್ಲಿ ‘ಪಾಕ್ ಪರ ಘೋಷಣೆ’ ಪ್ರಕರಣ : ಮೂವರು ಆರೋಪಿಗಳಿಗೆ 2 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನಂತರ 2 ದಿನ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ.

ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಜಡ್ಜ್ ಮೂವರು ಆರೋಪಿಗಳಿಗೆ 2 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಎಫ್.ಎಸ್.ಎಲ್. ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ವಿಚಾರ ರಾಜಕೀಯ ವಾಕ್ಸಮರಗಳಿಗೆ ಕಾರಣವಾಗಿತ್ತು. ಆರೋಪಿಗಳನ್ನು ಬಂಧಿಸುವಂತೆ ಭಾರಿ ಆಗ್ರಹ ವ್ಯಕ್ತವಾಗಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...