ಬೆಂಗಳೂರು : ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ.
ಮುಂಬೈ ಮೂಲದ ನ್ಯಾಷನಲ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಧ್ರುವ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದು ಬಂದಿಲ್ಲ.
ಗುರುವಾರ ಮಧ್ಯಾಹ್ನ 2:10ರ ಸುಮಾರಿಗೆ ಮೆಟ್ರೋ ಹಳಿಗೆ ವ್ಯಕ್ತಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಹಳಿಗೆ ಧುಮುಕಿದ್ದಾನೆ.
ಮೊಬೈಲ್ ನಲ್ಲಿ ಮಾತನಾಡುತ್ತಲ್ಲೇ ಈತ ಮೆಟ್ರೋ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಪರಿಣಾಮ ರೈಲಿನ ಹಳಿಯಡಿ ಸಿಲುಕಿ ಈತ ಮೃತಪಟ್ಟಿದ್ದಾನೆ. ಪರಿಣಾಮ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹವನ್ನು ಹೊರತೆಗೆಯಲಾಗಿದೆ.