ಮೈಸೂರು : ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದೆ.
ಮೃತ ಚೇತನ್ ಅಮೆರಿಕದಲ್ಲಿರುವ ತನ್ನ ಸಹೋದರ ಭರತ್ ಗೆ ಮುಂಜಾನೆ 4 ಗಂಟೆಗೆ ಕರೆ ಮಾಡಿ ಮೂವರನ್ನು ಕೊಲೆ ಮಾಡಿದ್ದೇನೆ. ನಾನು ಸಾಯುತ್ತೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದಾನೆ ಎಂಬುದು ಬಯಲಾಗಿದೆ.
ಚೇತನ್ ಮೊದಲು ತನ್ನ ಕುಟುಂಬದವರಿಗೆ ವಿಷ ಉಣಿಸಿ ಕೊಲ್ಲಲು ನಿರ್ಧರಿಸಿದ್ದಾನೆ. ಆದರೆ ವಿಷ ಸೇವಿಸಿ ಮೂವರು ಮೃತಪಡದೇ ಇದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ತಾನೂ ಕೂಡ ಸೂಸೈಡ್ ಮಾಡಿಕೊಂಡಿದ್ದಾನೆ.
ನಮ್ಮ ಸಾವಿಗೆ ನಾವೇ ಕಾರಣ, ಹಣಕಾಸಿನ ಸಮಸ್ಯೆಯಿಂದ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಸ್ನೇಹಿತರು, ಸಂಬಂಧಿಕರಿಗೆ ತೊಂದರೆ ಕೊಡಬೇಡಿ, ನಮ್ಮನ್ನು ಕ್ಷಮಿಸಿ ಬಿಡಿ ಐ ಯಮ್ ಸ್ವಾರಿ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.ಚೇತನ್ ಎಂಬುವವರು ತಮ್ಮ ಪತ್ನಿ ರೂಪಾಲಿ , ತಾಯಿ ಮತ್ತು ಮಗುವನ್ನ ಕೊಂದು ಸೂಸೈಡ್ ಮಾಡಿಕೊಂಡಿದ್ದಾರೆ. ಕುಶಾಲ್(15), ಚೇತನ್(45), ರೂಪಾಲಿ(43), ಪ್ರಿಯಂವಧಾ(62) ಮೃತಪಟ್ಟವರು . ಸ್ಥಳಕ್ಕೆ ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.