alex Certify BIG UPDATE : ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಸಿಎಂ, ಹೀಗಿದೆ ಹೈಲೆಟ್ಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಸಿಎಂ, ಹೀಗಿದೆ ಹೈಲೆಟ್ಸ್..!

ಬೆಂಗಳೂರು : ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 8,919 ಕೋಟಿ ರೂ.ಗಳನ್ನು ಕೊಟ್ಟಿದೆ. ಪಿಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ.35 ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಬಿಜೆಪಿ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 8,919 ಕೋಟಿ ರೂ.ಗಳನ್ನು ಕೊಟ್ಟಿದೆ. ಪಿಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ.35 ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ . ಪಿ.ಎಂ ಆವಾಸ್ ಯೋಜನೆಯಡಿ 5-6 ಲಕ್ಷ ರೂ ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50 ಲಕ್ಷ ರೂ. ನೀಡುತ್ತದೆ. ಒಟ್ಟಾರೆಯಾಗಿ 13,005 ಕೋಟಿ ರೂ.ಗಳು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬರುತ್ತದೆ ಅಷ್ಟೇ. ಇದರಲ್ಲಿ ನಮ್ಮ ಹೆಸರಿಲ್ಲ. ಇದು ಯಾವ ನ್ಯಾಯ? ಎಂದಿದ್ದಾರೆ.

2013 ಮಾರ್ಚ್ ವರೆಗೆ 2,067 ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು, ಇಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ. ಸರ್ವಶಿಕ್ಷಣ ಅಭಿಯಾನದಡಿ 702 ಕೋಟಿ ರೂ. ಕೇಂದ್ರ ಬಿಜೆಪಿ ಸರ್ಕಾರ ಕೊಟ್ಟರೆ, ನಮ್ಮ ಪಾಲು 472 ಕೋಟಿ ರೂ. ಇದೆ. ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 1,528 ಕೋಟಿ ರೂ.ಗಳನ್ನು ನೀಡಿದೆ. ಮಧ್ಯಾಹ್ನದ ಬಿಸಿಯೂಟದಡಿ ರೂ.594 ಕೋಟಿ ಕೇಂದ್ರ ಸರ್ಕಾರ ಕೊಟ್ಟರೆ, ರಾಜ್ಯ ಸರ್ಕಾರ 1,313 ಕೋಟಿ ರೂ.ಗಳನ್ನು ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 187 ಕೋಟಿ ರೂ.ಗಳನ್ನು ಕೇಂದ್ರ ನೀಡಿದ್ದರೆ, 748 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೀಡಿದೆ ಎಂದಿದ್ದಾರೆ.

ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಸೇತುವೆ, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕೇಂದ್ರದಿಂದ ಪಾಲು ಬರುತ್ತದೆ. ರೈಲ್ವೆಗೆ ಜಮೀನು ಕೊಟ್ಟು ಯೋಜನಾ ವೆಚ್ಚದಲ್ಲಿ ಶೇ.50 ರಷ್ಟು ರಾಜ್ಯ ಸರ್ಕಾರ ಭರಿಸುತ್ತದೆ. ರೈಲ್ವೆ ಇಂದ ಬಂದ ಆದಾಯವನ್ನು ಅವರೇ ಇಟ್ಟುಕೊಳ್ಳುತ್ತಾರೆ. ಟೋಲ್ ಸಂಗ್ರಹದಿಂದ ಬರುವ ಆದಾಯವನ್ನೂ ನಮ್ಮ ನಾಡಿನ ಜನರಿಗೆ ವಾಪಾಸ್ ಕೊಡುವುದಿಲ್ಲ. ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ 50,257 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ಕೇಂದ್ರ ಪುರಸ್ಕೃತ ಯೋಜನೆಗಳೂ ಸೇರಿವೆ. ಅದರಲ್ಲಿಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ ಎಂದಿದ್ದಾರೆ.

ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಅವರ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ. ರಾಜ್ಯದ ಸ್ವಂತ ತೆರಿಗೆ 78% ಇದ್ದರೆ 22% ಕೇಂದ್ರ ಸರ್ಕಾರದಿಂದ ಬರುತ್ತದೆ. ಅದೇ ಗುಜರಾತಿಗೆ 75% ಸ್ವಂತ ತೆರಿಗೆಯಿಂದ ಬಂದರೆ 17% ಕೇಂದ್ರದಿಂದ ಹಾಗೂ ಸಹಾಯಧನ ಸೇರಿ 25% ಕೇಂದ್ರದಿಂದ ಹೋಗುತ್ತಿದೆ. ಉತ್ತರ ಪ್ರದೇಶಕ್ಕೆ 48% ಸ್ವಂತ ತೆರಿಗೆ ಇದ್ದರೆ 32% ಹಾಗೂ 20% ಸೇರಿ ಒಟ್ಟು 52% ಕೇಂದ್ರದಿಂದ ಹೋಗುತ್ತಿದೆ. ಆದರೆ ನಮಗೆ ಕೇವಲ 22% ಕೊಡುತ್ತಿದ್ದಾರೆ. ಇದನ್ನು ಪ್ರಶ್ನಿಸುವುದು ಒಕ್ಕೂಟ ವಿರೋಧಿ ನಡೆಯೇ?

2018 ರಲ್ಲಿ ನನ್ನ ಅವಧಿಯ ಮುಕ್ತಾಯದ ವೇಳೆ 2.42 ಲಕ್ಷ ಕೋಟಿ ಸಾಲ ಇದ್ದು, 2023 ಮಾರ್ಚ್ ವೇಳೆಗೆ 5.23 ಲಕ್ಷ ಕೋಟಿ ಆಗಿತ್ತು. ಬಿಜೆಪಿ ಸರ್ಕಾರದ ನಾಲ್ಕು ವರ್ಷದಲ್ಲಿ 2,81,00 ಕೋಟಿ ರೂ. ಸಾಲ ಮಾಡಿದ್ದಾರೆ. ಇದಲ್ಲದೇ ಜಿ.ಎಸ್.ಟಿ. ಪರಿಹಾರ ಸಾಲ 3,000 ಕೋಟಿ ರೂ. ಮಾಡಿದ್ದಾರೆ. ಕೇಂದ್ರದಲ್ಲಿ 2013-14 ರಲ್ಲಿ ರೂ.53,10,000 ಕೋಟಿ ಸಾಲ ಇತ್ತು. ಈಗ ರೂ.183,67,132 ಕೋಟಿ ಸಾಲ ಇದೆ.

ಪ್ರಧಾನಿ ಮೋದಿ ಅವರ ಅವಧಿಯಲ್ಲಿ 130 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ದೇಶವನ್ನು ಸಾಲಗಾರರನ್ನಾಗಿ ಮಾಡಿದವರು ಯಾರು? ನರೇಂದ್ರ ಮೋದಿಜಿ, ಬಿಜೆಪಿಯವರು ಅಲ್ಲವೇ? ನಾವು ಬಡವರಿಗೆ, ರೈತರಿಗೆ, ಹೆಣ್ಣುಮಕ್ಕಳಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದ ಭೌತಿಕ ಆರೋಗ್ಯ, ಆರ್ಥಿಕ ಆರೋಗ್ಯ, ಮಾನಸಿಕ ಆರೋಗ್ಯ ಹಾಗೂ ಆಧ್ಯಾತ್ಮಿಕ ಆರೋಗ್ಯ- ಈ ನಾಲ್ಕು ಆಯಾಮಗಳಲ್ಲಿ ಕಾರ್ಯನಿರ್ವಹಿಸಲಿದ್ದೇವೆ.

ನಾವು ಸಾಲ ಮಾಡಿರುವುದು ನಿಜ. ಆದರೆ ಅದು ಜಿ.ಎಸ್.ಡಿ.ಪಿ.ಯ ಶೇ. 23.68 ರಷ್ಟಿದೆ. ಅಂದರೆ ಶೇ. 25ರ ಒಳಗೇ ಇದೆ. ವಿತ್ತೀಯ ಕೊರತೆ 2.95% ಇದೆ. ರಾಜಸ್ವ ಉಳಿತಾಯ ಇಲ್ಲ ನಿಜ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ 5.1% ರಷ್ಟಿದೆ. ರಾಜ್ಯ ಸರ್ಕಾರ ಒಂದೇ ಒಂದು ಬಾರಿ 2020-21 ರಲ್ಲಿ ಶೇ. 3ರ ಮಿತಿ ದಾಟಿದೆ. ಇನ್ನು ಎರಡು ವರ್ಷದಲ್ಲಿ ಆಯವ್ಯಯವನ್ನು ರಾಜಸ್ವ ಉಳಿತಾಯಕ್ಕೆ ತಂದೇ ತರುತ್ತೇನೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...