alex Certify BIG UPDATE : ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ : ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ : ಮೂವರು ಸಾವು

ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಗೋಳಿಯಂಗಡಿ ಹತ್ತಿರದ ಕಡ್‌ ತ್ಯಾರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಪಟಾಕಿ ತಯಾರಿಕಾ ಘಟಕದಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಪೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್‌, ಹಾಸನ ನಾಯಕನಹಳ್ಳಿ ಚೇತನ್‌, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಸ್ಪೋಟದಲ್ಲಿ ಗಾಯಗೊಂಡಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...