alex Certify BIG UPDATE : ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಏಳು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಏಳು ಆರೋಪಿಗಳು ಅರೆಸ್ಟ್

ಬೆಳಗಾವಿ : ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ವಂಟಮೂರಿಗೆ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ಘಟನೆ ಸಂಬಂಧ ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆಯನ್ನು ನಮ್ಮ ಸಿಬ್ಬಂದಿ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದರು. ಯುವತಿ ಜೊತೆ ಯುವಕ ಓಡಿ ಹೋಗಿದ್ದಕ್ಕೆ ಯುವತಿ ಮನೆಯವರು ಗಲಾಟೆ ಮಾಡಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ, ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ, ಉಳಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...