ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿರುವ ‘ಲಾಯರ್ ಜಗದೀಶ್’ ನಿಮಗೆ ಗೊತ್ತೇ ಇದೆ. ಬಿಗ್ ಬಾಸ್ ಮನೆಯಲ್ಲಿ ನೇರವಾಗಿ ಇದ್ದಿದ್ದು ಇದ್ದಂಗೆ ಹೇಳುವ ಜಗದೀಶ್ ಇದೀಗ ಸುದ್ದಿಯಲ್ಲಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಕಾನೂನು ಪದವಿ ಕ್ಯಾನ್ಸಲ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಕುರಿತು ಪ್ರಶಾಂತ್ ಸಂಬರಂಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಸುದ್ದಿಯಾಗಿದ್ದಾರೆ.
Bigg boss ಜಗದೀಶನ ಲಾ ಡಿಗ್ರಿ ಕ್ಯಾನ್ಸಲ್
Bigg boss ಜಗದೀಶನ ಲಾ ಡಿಗ್ರಿ ಕ್ಯಾನ್ಸಲ್ ಆಗಿದೆ. ಆತನ 2nd PUC ಮಾರ್ಕ್ಸ್ ಕಾರ್ಡ್ ನಕಲಿ ಆಗಿರುವುದರಿಂದ, ನಂತರದ ಡಿಗ್ರಿಗಳು (ಕಾನೂನು ಡಿಗ್ರಿ ಸೇರಿ) ಮಾನ್ಯವಲ್ಲದಿದ್ದುದರಿಂದ ಆತನ ಸನ್ನದ್ದು ವಾಪಾಸ್ ಕೊಡುವಂತೆ ಬಾರ್ ಕೌನ್ಸಿಲ್ ಆದೇಶ ನೀಡಿದೆ.ಆತನ 2nd PUC ಮಾರ್ಕ್ಸ್ ಕಾರ್ಡ್ ನಕಲಿ ಆಗಿರುವುದರಿಂದ, ನಂತರದ ಡಿಗ್ರಿಗಳು (ಕಾನೂನು ಡಿಗ್ರಿ ಸೇರಿ) ಮಾನ್ಯವಲ್ಲದಿದ್ದುದರಿಂದ ಆತನ ಸನ್ನದ್ದು ವಾಪಾಸ್ ಕೊಡುವಂತೆ ಬಾರ್ ಕೌನ್ಸಿಲ್ ಆದೇಶ ನೀಡಿದೆ ಎಂದು ಪ್ರಶಾಂತ್ ಸಂಬರಂಗಿ ಪೋಸ್ಟ್ ಮಾಡಿದ್ದಾರೆ.