ಬೆಂಗಳೂರು : ವಿದೇಶ ಪ್ರವಾಸಕ್ಕೆ ಹೋಗಿದ್ದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ವಿದೇಶ ಪ್ರವಾಸಕ್ಕೆ ಹೋಗಿದ್ದಾಗ ಸ್ಪಂದನಾಗೆ ಹೃದಯಾಘಾತ ಆಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಪಂದನಾ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿನ್ನಾರಿ ಮುತ್ತಾ ಸಿನಿಮಾದ ಮೂಲಕ ವಿಜಯ್ ರಾಘವೇಂದ್ರ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು. ಹಲವು ರಿಯಾಲಿಟಿ ಶೋ, ಸಿನಿಮಾದ ಮೂಲಕ ವಿಜಯ್ ರಾಘವೇಂದ್ರ ಛಾಪು ಮೂಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರನ್ನು ನಟವಿಜಯ್ ರಾಘವೇಂದ್ರ ಅವರು 26 ಆಗಸ್ಟ್ 2007 ರಂದು ಪ್ರೀತಿಸಿ ಮದುವೆಯಾಗಿದ್ದರು.