ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಪುನೀತ್ ಕೆರೆಹಳ್ಳಿ ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆ ಹೆಸರಿನಲ್ಲಿ ಜನರನ್ನು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದ ಎಂಬ ಕಾರಣಕ್ಕೆ ವರದಿ ಸಿದ್ದಪಡಿಸಿ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.