ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತ ಉಂಟಾಗಲಿದ್ದು, ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೆರೆಪೀಡಿತ, ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ. ಅಲ್ಲದೇ ಸಾರ್ವಜನಿಕರು, ಪ್ರವಾಸಿಗರು ಕೂಡ ಸಮುದ್ರ, ನದಿ ನೀರಿಗಿಳಿಯದಂತೆ ಎಚ್ಚರ ವಹಿಸುವಂತೆ ಸೂಚಿಸಿದೆ.