alex Certify BIGG NEWS : ರಾಜ್ಯದ ಹಳ್ಳಿಗಳಲ್ಲಿ 1 ಸಾವಿರ `ಗ್ರಾಮ ನ್ಯಾಯಾಲಯ’ ಸ್ಥಾಪನೆ : ಸಚಿವ ಹೆಚ್.ಕೆ.ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ಹಳ್ಳಿಗಳಲ್ಲಿ 1 ಸಾವಿರ `ಗ್ರಾಮ ನ್ಯಾಯಾಲಯ’ ಸ್ಥಾಪನೆ : ಸಚಿವ ಹೆಚ್.ಕೆ.ಪಾಟೀಲ್

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1 ಸಾವಿರ ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಎಂಎಫ್ ಸಿ ನ್ಯಾಯಾಲಯಗಳ ಮಾದರಿಯಲ್ಲಿ ಗ್ರಾಮ ಮಟ್ಟದಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಶೀಘ್ರವೇ ಹೊಸ ನಿಯಮಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ 1,000 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರೂಪರೇಷೆ ಸಿದ್ದಪಡಿಸಲಾಗುತ್ತದೆ.ಬಳಿಕ ಕಾನೂನು ತಜ್ಞರ ಸಲಹೆ, ಅಭಿಪ್ರಾಯ ಸಂಗ್ರಹಿಸಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...