ಬೆಂಗಳೂರು : ರಾಜ್ಯದಲ್ಲಿ 195 ತಾಲೂಕುಗಳನ್ನು ಬರಪೀಡತವೆಂದು ಘೋಷಿಸಿದ್ದು, ಮತ್ತೆ 15 ತಾಲೂಕುಗಳನ್ನು ಕೇಂದ್ರದ ಮಾರ್ಗಸೂಚಿಯಂತೆ ಬರಪೀಡಿತವೆಂದು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ರಾಜ್ಯದಲ್ಲಿ ಮತ್ತೆ 15 ತಾಲೂಕುಗಳನ್ನು ಕೇಂದ್ರದ ಮಾರ್ಗಸೂಚಿಯಂತೆ ಬರಪೀಡಿತವೆಂದು ಘೋಷಣೆ ಮಾಡಲಾಗುವುದು. ಈ ಬಗ್ಗೆ ಅ.9 ರಂದು ನಡೆಯಲಿರುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.
ಬರ ಘೋಷಣೆ ಸೇರಿದಂತೆ ಇತರೆ ಕೆಲಸ ಮಾನದಂಡಗಳ ಬದಲಾವಣೆಗೆ ಕೇಂದ್ರ ತಂಡವನ್ನು ವಿನಂತಿಸಲಾಗಿದೆ. ಹಾಗೆಯೇ, ಕೇಂದ್ರ ಅಂಕಿ ಸಂಖ್ಯೆಗಿಂತಲೂ ರಾಜ್ಯದಲ್ಲಿ ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದೆ. ದಿನೇ ದಿನೇ ಭೂ ಒಡೆತನ ಸರಾಸರಿ ವಿಸ್ತೀರ್ಣ ಕಡಿಮೆಯಾಗುತ್ತಿದ್ದು, ಆ ಮಾಹಿತಿಯನ್ನು ಕೇಂದ್ರ ತಂಡಕ್ಕೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.