ಇಂಫಾಲ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದ್ದು, ಮೊರೆ ಜಿಲ್ಲೆಯಲ್ಲಿ 30 ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.
ಬುಧವಾರ ಮಣಿಪುರದ ಮೊರೆ ಜಿಲ್ಲೆಯಲ್ಲಿ ಹಿಂಸಾಚಾರ ಶುರುವಾಗಿದ್ದು, ಭದ್ರತಾ ಪಡೆಗಳ ಜೊತೆಗೆ ದುಷ್ಕರ್ಮಿಗಳು ಗುಂಡಿನ ಚಕಮಕಿ ನಡೆಸಿದ್ದಾರೆ. 30 ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರತಾ ಪಡೆ ಸಿಬ್ಬಂದಿ ರವಾನೆಗೆ ಬಳಸುತ್ತಿದ್ದ ಎರಡು ಬಸ್ ಗಳಿಗೆ ಬೆಂಕಿ ಹಚ್ಚಿದ್ದಾರೆ.
ಸುಮಾರು 3 ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಹಿಂಸಾಚಾರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದಲ್ಲಿ ಸಾರ್ವಜನಿಕ, ಖಾಸಗಿ ಆಸ್ತಿಗಳಿಗೆ ಹಾನಿಯಾಗಿದೆ.