alex Certify BIGG NEWS : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : 30 ಮನೆ, ಅಂಗಡಿಗಳಿಗೆ ಬೆಂಕಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : 30 ಮನೆ, ಅಂಗಡಿಗಳಿಗೆ ಬೆಂಕಿ!

ಇಂಫಾಲ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದ್ದು, ಮೊರೆ ಜಿಲ್ಲೆಯಲ್ಲಿ 30 ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಬುಧವಾರ ಮಣಿಪುರದ ಮೊರೆ ಜಿಲ್ಲೆಯಲ್ಲಿ ಹಿಂಸಾಚಾರ ಶುರುವಾಗಿದ್ದು, ಭದ್ರತಾ ಪಡೆಗಳ ಜೊತೆಗೆ ದುಷ್ಕರ್ಮಿಗಳು ಗುಂಡಿನ ಚಕಮಕಿ ನಡೆಸಿದ್ದಾರೆ. 30 ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರತಾ ಪಡೆ ಸಿಬ್ಬಂದಿ ರವಾನೆಗೆ ಬಳಸುತ್ತಿದ್ದ ಎರಡು ಬಸ್ ಗಳಿಗೆ ಬೆಂಕಿ ಹಚ್ಚಿದ್ದಾರೆ.

ಸುಮಾರು 3 ತಿಂಗಳಿನಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಹಿಂಸಾಚಾರದಲ್ಲಿ ಈವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅಪಾರ ಪ್ರಮಾಣದಲ್ಲಿ ಸಾರ್ವಜನಿಕ, ಖಾಸಗಿ ಆಸ್ತಿಗಳಿಗೆ ಹಾನಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...