alex Certify BIGG NEWS : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಾಶ, 30 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಾಶ, 30 ಸಾವಿರ ಕೋಟಿ ರೂ.ನಷ್ಟ : ಸಿಎಂ ಸಿದ್ದರಾಮಯ್ಯ ಮಾಹಿತಿ

ಚಿತ್ರದುರ್ಗ : 22 ವರ್ಷಗಳಲ್ಲೇ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಈಗಾಗಲೇ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. 42 ಲಕ್ಷ ಹೆಕ್ಟೇರ್ ಬೆಳೆ ನಾಶ;ರೂ.30 ಸಾವಿರ ಕೋಟಿ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ,22 ವರ್ಷಗಳಲ್ಲೇ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಈಗಾಗಲೇ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. ಕೃಷಿ ಸಚಿವರು ಸಭೆ ನಡೆಸಲಿದ್ದು ಬರ ಪೀಡಿತ ತಾಲೂಕುಗಳ  ಸಂಖ್ಯೆ ಹೆಚ್ಚಾಗಬಹುದು. ರಾಜ್ಯದಲ್ಲಿ ಒಟ್ಟು 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ರೂ. 30 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ.  ಕೇಂದ್ರ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ರೂ.4860 ಕೋಟಿ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದ್ದು. 11 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ನೆಡೆಸಿ, ಅವಲೋಕಿಸಿ ವರದಿ ನೀಡಲಿದೆ.

ರಾಜ್ಯದಲ್ಲಿ ತೀವ್ರ ತರನಾದ ಬರಾಗಲ ಬಂದಿದೆ. ಶುದ್ಧ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜನರಿಗೆ ಉದ್ಯೋಗ ನೀಡಬೇಕು. ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ತಿಳಿಸಿದರು.

ಸರ್ಕಾರದಿಂದ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ಜೀವನ ಮಟ್ಟ ಸುಧಾರಣೆ ಮಾಡಲಾಗುತ್ತಿದೆ.  1.26 ಕೋಟಿ ಮಹಿಳೆಯರಿಗೆ ಗೃಹಲಕ್ಷೀ ಯೊಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ತೊಂದರೆಯಿಂದ ಹಣ ಜಮೆ ಆಗಿರುವುದಿಲ್ಲ. ಶಕ್ತಿ ಯೋಜನೆಯಡಿ  50 ರಿಂದ 60 ಲಕ್ಷ ಮಹಿಳೆಯರು ಪ್ರತಿನಿತ್ಯ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಕುಟುಂಬದ ಸದಸ್ಯರಿಗೆ ತಲಾ ಒಂದು 10 ಕೆ.ಜಿ. ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಸದ್ಯ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಉಳಿದ 5 ಕೆ.ಜಿ. ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ ಎಂದರು.

ಕಲುಷಿತ ನೀರನ್ನು ಕುಡಿದು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿ 6 ಜನರು ಮರಣ ಹೊಂದಿದ್ದಾರೆ. ಇದರಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಸೇರಿದವರು, ಇವರ ವೃತ್ತಿ ಕೂಲಿ ಮಾಡುವುದು, ಸಪಾಯಿ ಕರ್ಮಾಚಾರಿ, ಕೃಷಿ ಕಾರ್ಮಿಕರು, ಹಮಾಲಿ ಕೆಲಸದಲ್ಲಿ ತೊಡಿಗರುವ ಇದ್ದಾರೆ. ಆರ್ಥಿಕವಾಗಿ ತುಂಬಾ ದುರ್ಬಲರಾಗಿರುತ್ತಾರೆ. ಇವರಿಗೆ ನಿವೇಶನ, ಮನೆ, ಜಮೀನು, ಉದ್ಯೋಗ ಮೂಲಭೂತ ಸೌಕರ್ಯಗಳು ಒದಗಿಸಬೇಕು. ರಸ್ತೆ ಅಗಲೀಕರಣದಿಂದ ಕವಾಡಿಗರಹಟ್ಟಿ 60 ಮನೆ ತೆರವುಗೊಳಿಸಬೇಕಾಗಿದೆ. ಇವರಿಗೆ ಸೂಕ್ತ ಪರಿಹಾರ ನೀಡಿ, ನಂತರ ತೆರವುಗೊಳಿಸಬೇಕು.ನಿವೇಶನ, ವಸತಿ ಕಲ್ಪಿಸಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನೇತೃತ್ವದಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಿದರು.  ಇದೇ ಸಂದರ್ಭದಲ್ಲಿ ಮೃತರ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...