alex Certify BIGG NEWS : ಆಗಸ್ಟ್ 24 ರಂದು `4ನೇ ಗ್ಯಾರಂಟಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಆಗಸ್ಟ್ 24 ರಂದು `4ನೇ ಗ್ಯಾರಂಟಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಈಗಾಗಲೇ 3 ಗ್ಯಾರಂಟಿ ಜಾರಿಯಾಗಿವೆ. ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ ಎಂದರು.

ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...