BIGG NEWS : ಇನ್ ಸ್ಟಾಗ್ರಾಮ್ ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್ : ಆರೋಪಿ ಅರೆಸ್ಟ್

ಹುಬ್ಬಳ್ಳಿ : ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ರಜನಿಕಾಂತ್ ಖಾಸಗಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಕಳೆದ ವರ್ಷ ತರಗತಿಗೆ ಈತನ ಹಾಜರಿ ಕಡಿಮೆ ಇದ್ದಿದ್ದರಿಂದ ಪರೀಕ್ಷೆಗೆ ಅವಕಾಶ ಕೊಟ್ಟಿರಲಿಲ್ಲ ಹೀಗಾಗಿ ಕಾಲೇಜಿನ ಮೇಲೆ ಸೇಡು ತೀರಿಸಿಕೊಳ್ಳಲು ಇನ್ ಸ್ಟಾಗ್ರಾಮ್ ನಲ್ಲಿ ನಕಲಿ ಅಕೌಂಟ್ ಕ್ರಿಯೆಟ್ ಮಾಡಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಹರಿಬಿಟ್ಟಿದ್ದನ್ನು.

ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ಸೇರಿದಂತೆ ಹಲವು ರಾಜಕಾರಣಿಗಳ ಫೋಟೋ ಬಳಸಿ ಟಿಪ್ಪು ಸುಲ್ತಾನ್ ಗೆ ನಮಸ್ಕರಿಸುವ ವಿಡಿಯೋ ಹರಿಬಿಟ್ಟಿದ್ದನ್ನು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read