ಬೆಂಗಳೂರು : ಕಾವೇರಿ ನದಿ ಸೇರಿದಂತೆ ಜಲ ವಿವಾದಗಳ ಕುರಿತಂತೆ ಸರ್ವಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ವಪಕ್ಷಗಳ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಮೇಕೆದಾಟು ಮಹದಾಯಿ ಮತ್ತು ಕಾವೇರಿ ನದಿ ವಿವಾದ ಬಗ್ಗೆ ಸರ್ವ ಪಕ್ಷಗಳ ಇದಕ್ಕೆ ಸರ್ವ ಪಕ್ಷಗಳು ಸಮ್ಮತಿ ಸೂಚಿಸಿವೆ,ಜಲ ವಿವಾದಗಳ ಕುರಿತಂತೆ ಸರ್ವಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಜಲ ವಿವಾಧಗಳ ಬಗ್ಗೆ ಮನವರಿಕೆ ಮಾಡಿಕೊತ್ತೇವೆ ಎಂದರು.
ರಾಜ್ಯ ಸರ್ಕಾರ ರೈತರ ಹಿತ ಕಾಪಾಡಲಿದೆ. ರಾಜ್ಯ ಸರ್ಕಾರ ರಾಜ್ಯದ ಹಿತದೃಷ್ಟಿಯಿಂದ ತೆಗೆದುಕೊಳ್ಳುವ ನಿಲುವುಗಳಿಗೆ ಬೆಂಬಲವಿದೆ ಎಂದು ಸರ್ವ ಪಕ್ಷದ ನಾಯಕರು ಹೇಳಿದ್ದಾರೆ. ಕೆ ಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ಆಗಸ್ಟ್ ಕೊನೆಯವರೆಗೆ 86.38 ಟಿಎಂಸಿ ನೀರು ಬಿಡಬೇಕಾಗಿತ್ತು. ಜೂನ್ನಲ್ಲಿ ಮಳೆಯ ಕೊರತೆ ಆಗಿತ್ತು, ಜುಲೈನಲ್ಲಿ ಮಳೆ ಬಂದಿದೆ. ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆ ಆಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಜೂನ್ನಲ್ಲಿ ಎರಡು ಟಿಎಂಸಿ ನೀರು, ಜುಲೈನಲ್ಲಿ 8.74 ಟಿಎಂಸಿ, ಆಗಸ್ಟ್ನಲ್ಲಿ 26 ಟಿಎಂಸಿ ನೀರು ಬಿಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.