ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಸಹಾಯವಾಣಿ ಜಾರಿಗೆ ತರಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇರುವ ಗ್ರಾಮಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಸಹಾಯವಾಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗ್ರಾಮಮಟ್ಟದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಎಂಬ ಸಹಾಯವಾಣಿಯನ್ನು ಇನ್ನೆರಡು ತಿಂಗಳಲ್ಲಿ ಆರಂಭಿಸಲಾಗುವುದು. ಇದು ರಾಜ್ಯಾದ್ಯಂತ ಎಲ್ಲಾ ಪಂಚಾಯಿತಿಗಳ ವ್ಯವಸ್ಥೆಗೂ ಅನ್ವಯವಾಗಲಿದೆ. ಪಂಚತಂತ್ರ-2 ಸಾಫ್ಟ್ವೇರ್ ಮೂಲಕ ಮುಂದಿನ ದಿನಗಳಲ್ಲಿ 2 ರಿಂದ 3 ಸಾವಿರ ಕೋಟಿ ತೆರಿಗೆ ಸಂಗ್ರಹಿಸಲು ಸಾಧ್ಯವಾಗಲಿದೆ.