ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆ ಇದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಸದಸ್ಯರ ಮಾಹಿತಿಯನ್ನು ಡಿಡಿಓ ರವರ ಸಹಾಯದಿಂದ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ತಂತ್ರಾಂಶದಲ್ಲಿ ನೋಂದಾಯಿಸುವಂತೆ ಕೋರಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಸದಸ್ಯರನ್ನು ಯೋಜನೆಯಡಿಯಲ್ಲಿ ನೊಂದಾಯಿಸಿಕೊಳ್ಳಲು ಹೆಚ್.ಆರ್.ಎಂ.ಎಸ್.1.0 ತಂತ್ರಾಂಶದಲ್ಲಿ (ವೆಬ್ ಅಪ್ಲಿಕೇಷನ್) https://hrms.karnataka.gov.in ಯುಆರ್‌ಎಲ್’ ಮೂಲಕ ಹಾಗೂ ಮೊಬೈಲ್ ಅಪ್ಲಿಕೇಷನ್‌ನಲ್ಲಿ https://hrmsenroll.karnataka.gov.in ಯುಆರ್‌ಲ್ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ ಕೈಪಿಡಿಯಲ್ಲಿ ಹಂತ ಹಂತವಾಗಿ ನೊಂದಾಯಿಸುವ ವಿಧಾನ ವಿವರಿಸಲಾಗಿದೆ. ಕೈಪಿಡಿಯಲ್ಲಿ ತಿಳಿಸಿರುವಂತೆ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಅವಶ್ಯಕ ಮಾಹಿತಿಯನ್ನು ಡಿಡಿಓ ಸಹಾಯದಿಂದ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ತಂತ್ರಾಂಶದಲ್ಲಿ ಇಂಧೀಕರಿಸಲು ಜಾಗೃತಿ ಮೂಡಿಸಲು ಕೋರಿದೆ.