ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಇಂದಿನಿಂದ ಮನೆ ನಿರ್ಮಾಣದ ವಸ್ತುಗಳಾದ ಸಿಮೆಂಟ್, ಮರಳು, ಎಂ-ಸ್ಯಾಂಡ್ ಸೇರಿದಂತೆ ಹಲವು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿದೆ.
ನಂದಿನಿ ಹಾಲು ಸೇರಿದಂತೆ ಈಗಾಗಲೇ ಹಲವು ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮನೆ ಕಟ್ಟುವ ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿರುವುದು ಚಿಂತೆಗೀಡು ಮಾಡಿದೆ. ಆಗಸ್ಟ್ 1 ರ ಇಂದಿನಿಂದ ಮರಳು, ಎಂ-ಸ್ಯಾಂಡ್, ಜಲ್ಲಿಕಲ್ಲು, ಗ್ರಾನೈಟ್, ಟೈಲ್ಸ್, ಕಬ್ಬಿಣ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಲಿದೆ.
ಕಬ್ಬಿಣದ ಅದಿರು, ಜಲ್ಲಿಕಲ್ಲು, ಸೈಜ್ಗಲ್ಲು, ಗ್ರಾನೈಟ್ಸ್, ಮರಳು, ಎಂ.ಸ್ಯಾಂಡ್, ಬೋಲ್ಡರ್ಸ್, ದಿಂಡುಗಲ್ಲು, ಕರಿಕಲ್ಲು, ಬಿಳಿಕಲ್ಲು, ಮಲ್ಟಿಕಲರ್ ಗ್ರಾನೈಟ್, ಡೋಲೋಮೈಟ್, ಸಿಲಿಕಾ, ಅಲಂಕಾರಿಕ ಶಿಲೆ ಇತ್ಯಾದಿ ಉಪ ಖನಿಜಗಳ ಮೇಲೆ ರಾಯಲ್ಟಿ ಹೆಚ್ಚಿಸುವ ಮೂಲಕ ಇಲಾಖೆಗೆ ಹೊಸ ರಾಜಸ್ವ ಗುರಿ ನಿಗದಿಗೆ ಸರ್ಕಾರ ಮುಂದಾಗಿದೆ.
ರಾಜ್ಯ ಸರ್ಕಾರ ರಾಯಲ್ಟಿ ಹೆಚ್ಚಿಸಿದರೆ ಜಲ್ಲಿಕಲ್ಲು, ಸೈಜ್ಗಲ್ಲು, ಗ್ರಾನೈಟ್ಸ್, ಮರಳು, ಎಂ.ಸ್ಯಾಂಡ್, ಬೋಲ್ಡರ್ಸ್, ದಿಂಡುಗಲ್ಲು ಸೇರಿ ಇನ್ನಿತರ ನಿರ್ಮಾಣ ಬಳಕೆಯ ವಸ್ತುಗಳ ಬೆಲೆ ಹೆಚ್ಚಳವಾಗಲಿದೆ. ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬೀಳಲಿದೆ. ಖಾಸಗಿ, ಸರ್ಕಾರಿ ಕಾಮಗಾರಿಗಳು, ಮನೆ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿಗಳ ಮೇಲೆ ಪರಿ ಣಾಮ ಬೀರುವ ಸಾಧ್ಯತೆ ಇದೆ.