
ಮೈಸೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಈಗಲೇ ಕಾಂಗ್ರೆಸ್ ನವರು ದೆವ್ವ ಬಂದವರ ರೀತಿ ಆಡುತ್ತಿದ್ದಾರೆ. ಮೈತ್ರಿಯಾದ್ರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನವೂ ಗೆಲ್ಲಲ್ಲ. ಆ ಭಯದಿಂದ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದರು.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ನಮ್ಮ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಮೈತ್ರಿ ಒಳ್ಳೆಯದು ಎಂಬ ಅಭಿಪ್ರಾಯವನ್ನು ವರಿಷ್ಠರು ವ್ಯಕ್ತಪಡಿಸಿದ್ದಾರೆ.