alex Certify BIGG NEWS : ಬಿಜೆಪಿ, ಜೆಡಿಎಸ್ ನಿಂದ ಹಾಲಿ, ಮಾಜಿ ಶಾಸಕರು ಶೀಘ್ರ ಕಾಂಗ್ರೆಸ್ ಗೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಬಿಜೆಪಿ, ಜೆಡಿಎಸ್ ನಿಂದ ಹಾಲಿ, ಮಾಜಿ ಶಾಸಕರು ಶೀಘ್ರ ಕಾಂಗ್ರೆಸ್ ಗೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವ ಇಚ್ಛೆಯಿಂದ ಕಾಂಗ್ರೆಸ್ ಬರಲಿದ್ದಾರೆ  ಎಂದು ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ ಎಂದಿದ್ದಾರೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.

ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಆರೋಪ ಆಧಾರ ರಹಿತ ಮತ್ತು ರಾಜಕೀಯ ಹೇಳಿಕೆಯಾಗಿದೆ. 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ. ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ. ಅದರ ಬಗ್ಗೆ ಪ್ರಧಾನಿಗಳು ಮಾತನಾಡಲಿ ಎಂದು ಹೇಳಿದರು.

ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ ಎಂದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಎಂ ಆದವರು ಪ್ರಧಾನಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದಿದ್ದಾರೆ. ಅವಕಾಶ ನೀಡಿದರಲ್ಲವೇ ಭೇಟಿಯಾಗೋದು? ಬರಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು ಈಗಾಗಲೇ ಸಲ್ಲಿಸಲಾಗಿದೆ. ಕುಮಾರಸ್ವಾಮಿಯವರು ಹೇಗಿದ್ದರೂ ಬಿಜೆಪಿಯವರೊಂದಿಗೆ ಸೇರಿದ್ದಾರೆ. ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಿಸಲು ಕೇಂದ್ರದೊಂದಿಗೆ ಮಾತನಾಡಲಿ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...