alex Certify BIGG NEWS : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿಯಿಂದ `Pay CS’ ಅಭಿಯಾನ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿಯಿಂದ `Pay CS’ ಅಭಿಯಾನ!

ಬೆಂಗಳೂರು : ಕೃಷಿ ಸಚಿವ ಸಿ.ಎಸ್. ಚಲುವರಾಸ್ವಾಮಿ ವಿರುದ್ಧ ಇದೀಗ ಬಿಜೆಪಿ ಪೇ ಸಿಎಸ್ ಎಂಬ ಅಭಿಯಾನವನ್ನು ಆರಂಭಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸಪೋರ್ಟ್ ಎಂಬ ಗ್ರೂಪ್ ನಲ್ಲಿ ಕೃಷಿ ಸಚಿವರ ಫೋಟೋ ಬಳಸಿಕೊಂಡು ಕ್ಯೂ ಆರ್ ಕೋಡ್ ಮೂಲಕ ಪೇ ಸಿಎಸ್ ಎಂಬ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೇಸಿಎಸ್ ಪೋಸ್ಟರ್ ನಲ್ಲಿ ಕ್ಯೂಆರ್ ಕೋಡ್ ಬಳಕೆ ಮಾಡಿಕೊಂಡು ಪೇಸಿಎಸ್ ಎಂದು ಮಾಡಿ 6 ರಿಂದ 8 ಲಕ್ಷ ರೂಪಾಯಿ ಲಂಚ ಪಡೆಯಲಾಗುತ್ತದೆ ಎಂದು ಬರೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...