
ಬಾಗಲಕೋಟೆ : ಮೀಸಲಾತಿ ಬಗ್ಗೆ ಬಿಜೆಪಿ ಶಾಸಕರೊಬ್ಬ ವಿವಾದಾತ್ಮಕ ಹೇಳಿಕೆಯೊಂದು ವೈರಲ್ ಆಗಿದ್ದು, ದಲಿತಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಕುಲ ಎನ್ನುವುದು ಇಲ್ಲವೇ ಇಲ್ಲ. ಏನಾದರು ಸಿಗುತ್ತೆ ಅಂತ ಮೀಸಲಾತಿ ಸಂಬಂಧ ಬಡಿದಾಟ ನಡೀತಿದೆ. ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್ನಲ್ಲಿ ಬಂದುಬಿಡುತ್ತೀರಾ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಶಾಸಕ ಜಗದೀಶ್ ಹೇಳಿಕೆಯನ್ನು ಖಂಡಿಸಿ ದಲಿತಪರ ಸಂಘಟನೆ ಕಾರ್ಯಕರ್ತರು ಶಾಸಕ ಜಗದೀಶ್ ಮನೆಗೆ ಮುತ್ತಿಗೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.