alex Certify BIGG NEWS : ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ 9, 11 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ 9, 11 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾದರಿಯಲ್ಲೇ ಮಂಡಳಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈವರೆಗೆ 9,11 ನೇ ತರಗತಿಗೆ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಪನಿರ್ದೇಶಕರು ನಡೆಸುತ್ತಿದ್ದರು. ಇನ್ಮುಂದೆ ಮಂಡಳಿಯಿಂದಲೇ ಪ್ರಶ್ನೆ ಪತ್ರಿಕೆ ರೂಪಿಸಿ ಕಳುಹಿಸಿಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಪ್ರಗತಿಯನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ಮಂಡಳಿ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬೆಂಗಳೂರು, ಈಗಾಗಲೇ 10 ಮತ್ತು 12ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ಹಾಗೂ 5 ಮತ್ತು 8ನೇ ತರಗತಿಗಳಿಗೆ ಮೌಲ್ಯಾಂಕನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುತ್ತಿದ್ದು, 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಮಂಡಲಿಯಿಂದಲೇ ನಡೆಸಿದ್ದಲ್ಲಿ ಎಲ್ಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಬಲವರ್ಧನೆಗೊಳಿಸಬಹುದು ಎಂದು ಅಭಿಪ್ರಾಯಿಸಿರುತ್ತಾರೆ.

1966 ರ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯಿದೆ ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ತಿದ್ದುಪಡಿ ಅಧಿನಿಯಮ 2022 ರ ನಿಯಮ 15 (A) (IV) ರಲ್ಲಿ Any other Examination which the State Government may from time to time by motification specify: ಎಂದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳ ಜೊತೆಗೆ ಇತರ ಪರೀಕ್ಷೆಗಳನ್ನು ನಡೆಸಲು ಸರ್ಕಾರಿ ಆದೇಶವನ್ನು ಹೊರಡಿಸಬೇಕಿರುತ್ತದೆ. ಈ ಸಂಬಂಧ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸುವ ಕುರಿತು ಪರಿಶೀಲಿಸಿ. ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...