ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಮೀಸಲಾತಿ ಸೇರಿದಂತೆ 3 ಪ್ರಮುಖ ಶಿಫಾರಸ್ಸುಗಳಿಗೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಈ ಕುರಿತು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತು ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಜೊತೆಗೆ ಈ ಸಮಿತಿಯ 3 ಪ್ರಮುಖ ಶಿಫಾರಸ್ಸಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಮೊದಲನೆದಾಗಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರದಂತೆ ನೋಡಿಕೊಂಡು ಹಿಂದುಳಿದ ವರ್ಗಗಳಿಗೆ ಶೇ.33ರಷ್ಟು ಮೀಸಲಾತಿ. ಎರಡನೇ ಶಿಫಾರಸ್ಸು ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಸ್ಥಾನ ಒಬಿಸಿಗೆ ಮೀಸಲು. ಮೂರನೇ ಶಿಫಾರಸ್ಸು ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಶಾಖೆಗಳನ್ನು ಆಡಳಿತ ಸುಧಾರಣಾ ಇಲಾಖಾ ಹತೋಟಿಗೆ ನೀಡಲು ನ್ಯಾ. ಡಾ.ಕೆ.ಭಕ್ತವತ್ಸಲ ಸಮಿತಿ ನೀಡಿದ ಶಿಫಾರಸ್ಸಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.