ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಮರುನಾಮಕರಣಗೊಳಿಸಲು ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ 2023 ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಂಬರುವ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ.
ಈ ಮಂಡಳಿಯ ವ್ಯಾಪ್ತಿಗೆ ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 21 ತಾಲೂಕಗಳನ್ನು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಸೇರಿಸಲು ನಿರ್ಧರಿಸಲಾಗಿದೆ.