ಬೆಂಗಳೂರು : ಸೈಬರ್ ಅಪರಾಧ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರತ್ಯೇಕ ಸೈಬರ್ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಕ್ಕೆ ಪ್ರತ್ಯೇಕ ಸೈಬರ್ ನೀತಿ ರೂಪಿಸಿಕೊಳ್ಳಲು ಅನುಮೋದನೆ ನೀಡಲಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ನಿಯಂತ್ರಣದ ಅಗತ್ಯವಿದೆ. ಹೀಗಾಗಿ ರಾಜ್ಯಕ್ಕೆ ಪ್ರತ್ಯೇಕ ಸೈಬರ್ ನೀತಿ ರಚಿಸಲಾಗುವುದು. ಈ ನೀತಿಯಿಂದಾಗಿ ಸೈಬರ್ ಅಪರಾಧ ತಡೆಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸೈಬರ್ ನೀತಿಯಡಿ ಸೈಬರ್ ಭದ್ರತೆ, ದತ್ತಾಂಶ ಖಾಸಗಿ ತನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಗ್ರಾಮ ಮಟ್ಟದಲ್ಲೂ ಸ್ವಯಂ ಸೇವಕರ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಜೊತೆಗೆ ಅಪರಾಧ ತಡೆಗೆ ಹೊಸ ತಂತ್ರಾಂಶ ರೂಪಿಸಲಾಗುವುದು. ಈಮೂಲಕ ಸೈಬರ್ ಅಪರಾಧ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತದೆ.