ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ.
ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕದಿಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದಂತೆ ಕರ್ನಾಟಕವು ತಮಿಳುನಾಡಿಗೆ 11 ದಿನಗಳಲ್ಲಿ ಪ್ರತಿದಿನ 10 ಸಾವಿರ ಕ್ಯುಸೆಕ್ ನಂತೆ ಒಟ್ಟಾರೆ 10 ಟಿಎಂಸಿ ನೀರು ಹರಿಸಿದೆ.
ಕಾವೇರಿ ನದಿಯಿಂದ ಪ್ರತಿದಿನ 24 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸೆಪ್ಟೆಂಬರ್ 1 ರಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.