ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ ನಡೆಯಲಿದ್ದು, ಸಭೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಸ್.ಎಂ. ಕೃಷ್ಣ, ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದಗೌಡ ರಾಜ್ಯದ ಸಂಸದರು, ಹಿರಿಯ ವಕೀಲರಿಗೆ ಆಹ್ವಾನ ನೀಡಲಾಗಿದೆ.
ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಮಳೆ ಕೊರತೆಯಿಂದ ಕೆ.ಆರ್.ಎಸ್. ಜಲಾಶಯ ಭರ್ತಿಯಾಗಿಲ್ಲವಾದರೂ ತಮಿಳುನಾಡು ಸರ್ಕಾರ ತನ್ನ ಪಾಲಿನ ನೀರು ಹರಿಸುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಸಭೆ ಕರೆಯಲಾಗಿದೆ. ಸಭೆಯಲ್ಲಿ ಕೃಷ್ಣಾ ಮತ್ತು ಮಹದಾಯಿ ಬಗ್ಗೆಯೂ ಚರ್ಚೆ ನಡೆಸಲಾಗುವುದು.