alex Certify BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ ಸೇರಿದಂತೆ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ, ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲ್ಲೂಕುಗಳನ್ನು ಬರಪೀಡತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ, ಕುಡಿಯುವ ನೀರು, ಮೇವು, ಕೃಷಿ ಕೈಗಾರಿಕೆಗಳಿಗೆ ನೀರು, ಬೆಳೆಹಾನಿ, ಜನರ ಉದ್ಯೋಗದ ಸ್ಥಿತಿ ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ’ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಹಲವು ಬಾರಿ ನಿರ್ದೇಶನಗಳನ್ನು ನೀಡಲಾಗಿದೆ.

ಆದರಿಂದ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ನೀಡಿ ಪರಿಶೀಲಿಸುವುದು. ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುವುದು.

ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ ಪ್ರತಿ ತಾಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ದಿನಾಂಕ’ 15.11.2023ರೂಳಗೆ ವರದಿ ನೀಡಲು ಕೋರಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...