ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಇಂದು ಹಾಲಿನ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಪಾದಾಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ.
ಹಾಲಿನ ದರವನ್ನು ಲೀಟರ್ ಗೆ 5 ರೂ. ಹೆಚ್ಚಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಇಂದು ಸಂಜೆ 6 ಗಂಟೆಗೆ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎನ್ನಲಾಗಿದೆ.
ಹೈನು ರಾಸುಗಳ ನಿರ್ವಹಣಾ ವೆಚ್ಚ, ಪಶು ಆಹಾರಗಳ ಬೆಲೆ ಏರಿಕೆಯಿಂದಾಗಿ ಹಾಲು ಉತ್ಪಾದಕರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ 5 ರೂ. ಹೆಚ್ಚಿಸಬೇಕು. ಇಲ್ಲದಿದ್ದರೆ ಹಾಲು ಉತ್ಪಾದಕರು ಹಾಗೂ ಹೈನು ಉದ್ಯಮದ ಅಭಿವೃದ್ಧಿಗೆ ತೊಂದರೆ ಆಗಲಿದೆ ಎಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.