ಬೆಂಗಳೂರು : ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರನ್ನು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸಂಶೋಧನಾ ಘಟಕದ ಅಧ್ಯಕ್ಷರಾಗಿರುವ ರಾಜೀವ್ ಗೌಡ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.