
ಬೆಂಗಳೂರು : ಈಡಿಗ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಈಗಾಗಲೇ ಘೋಷಣೆಯಾಗಿರುವ ಈಡಿಗ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಜೊತೆಗೆ ನಾರಾಯಣ ಗುರು ಭವನ ನಿರ್ಮಿಸಲು ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬಿಡಿಎಯಿಂದ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ 108 ಚ.ಮೀ. ನಿವೇಶನದಲ್ಲಿ ನಾರಾಯಣಗುರು ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಜಾಗ ನೀಡಲಾಗಿದ್ದು, ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆರ್ಥಿಕ ಸಹಾಯ ನೀಡಲಿದೆ ಎಂದರು.