alex Certify BIGG NEWS : ಮಹಾದಾಯಿಗೆ ಕೇಂದ್ರ ಒಪ್ಪಿಗೆ ನೀಡಿದರೆ ಇಂದೇ ಟೆಂಡರ್ : ಸಿಎಂ ಸಿದ್ದರಾಮಯ್ಯ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಮಹಾದಾಯಿಗೆ ಕೇಂದ್ರ ಒಪ್ಪಿಗೆ ನೀಡಿದರೆ ಇಂದೇ ಟೆಂಡರ್ : ಸಿಎಂ ಸಿದ್ದರಾಮಯ್ಯ ಭರವಸೆ

ಧಾರವಾಡ : ಮಹಾದಾಯಿ ಯೋಜನೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದರೆ ಯೋಜನೆ ಅನುಷ್ಠಾನ ಸುಲಭ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ ಮಾತನಾಡಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರಕಾರ ಗೋವಾ ಸರಕಾರದೊಂದಿಗೆ ಸಮಾಲೋಚಿಸಿ, ಪರಿಸರ ಮತ್ತು ಅರಣ್ಯ ಸಂಬಂಧಿಸಿದ ತಕರಾರು ಪರಿಹರಿಸಿದರೆ ರಾಜ್ಯ ಸರಕಾರ ತಕ್ಷಣ ಕ್ರಮ ವಹಿಸಲಿದೆ. ರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಹೇಳಿದರು.

ಬೆಣ್ಣಿಹಳ್ಳ ಯೋಜನೆಯನ್ನು ಡಿಪಿಆರ್ ಮಾಡಿಸಿ, ಶೀಘ್ರವಾಗಿ ಜಾರಿಗೊಳಿಸಲಾಗುವುದು. ಧಾರವಾಡ ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ರೈತರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು

ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ.  ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ ಎಂದು ಹೇಳಿದರು.

ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದರು.

ಯುವಕರು, ಹೆಚ್ಚುಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ.  ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...