ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರು, ರೈತರು ಮತ್ತು ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ 14 ಜನಪರ ಯೋಜನೆಗಳನ್ನು ಕೈಬಿಟ್ಟಿದ್ದಾರೆ ಎಂದು ಎಂಎಲ್ ಸಿ ಚಲವಾದಿ ನಾರಾಯಣಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿ ರೈತ ವಿದ್ಯಾನಿಧಿ, ರೈತ ಸಮ್ಮಾನ್ ನಿಧಿ, ನಮ್ಮ ಕ್ಲಿನಿಕ್, ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ 500 ರೂ.ಗಳ ಪಿಂಚಣಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲ ನಿಧಿ ಮತ್ತು ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ನಿರ್ಮಾಣದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ತಿಳಿಸಿದರು.
ಈ ಯೋಜನೆಗಳನ್ನು ಕೈಬಿಡುವ ಸಿದ್ದರಾಮಯ್ಯ ಅವರ ನಿರ್ಧಾರವು ಅವರು ರೈತ ವಿರೋಧಿ ಮಾತ್ರವಲ್ಲ, ದಲಿತ ವಿರೋಧಿಯೂ ಹೌದು ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಅವರು ಹೇಳಿದರು.