ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಿಎಂ ಅಧಿಕಾರ ಹಂಚಿಕೆ ವಿಚಾರದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಮ್ಮ ಲೀಡರ್, ನಮ್ಮ ಕೆಲಸ ಏನು ಅದನ್ನು ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಜನರು ಸಾಮೂಹಿಕ ನಾಯಕತ್ವಕ್ಕೆ ಆಶೀರ್ವಾದ ಮಾಡಿದ್ದಾರೆ. ನಮಗೆ ಅದು ಮುಖ್ಯ ಎಂದರು.
ನನಗೆ ಯಾವ ಅರ್ಜೆಂಟ್ ಇಲ್ಲ. ಸಿಎಂ ಸಿದ್ದರಾಮಯ್ಯ, ನನ್ನ ನೇತೃತ್ವದಲ್ಲಿ ಲೋಕಸಭೆ ಚುನಾವಣೆಗೆ ಹೋಗುತ್ತೇವೆ. ಸಿದ್ದರಾಮಯ್ಯ ನಮ್ಮ ಲೀಡರ್, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ನಾನು ಸೇರಿದಂತೆ ಎಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.