
ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕುಮ್ಮಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬವನ್ನು ಒಂದೇ ದಿನ ತಾನೇ ಆಚರಣೆ ಮಾಡುವುದು, ಆದರೆ ದಿನ ಬಿಟ್ಟು ದಿನ ಈದ್ ಮಿಲಾದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹೀಗೆ ಮಾಡುವುದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆಸಿಕೊಂಡು ಗಲಭೆ ಮಾಡುವುದಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಗಲಾಟೆ ಮಾಡಲು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪರಮೇಶ್ವರ್ ಕುಮ್ಮಕ್ಕು ಕಾರಣ, ಅವರ ಕುಮ್ಮಕ್ಕನಿಂದಲೇ ಪುಂಡರು ಗಲಾಟೆ ಮಾಡಿದ್ದಾರೆ ಎಂದು ಹೇಳಿದ್ದಾರೆ.