ಬೆಂಗಳೂರು : ರಾಜ್ಯದಲ್ಲಿ ಅಸಮರ್ಪಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತಡವಾಗಿ ಆಗಮಿಸಿದ್ದು, ಮುಂಗಾರು ಮಳೆಯ ಕೊರತೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರದ ಷರತ್ತುಗಳ ಅಡ್ಡಿಯಾಗಿದ್ದು, ಬರಗಾಲ ಘೋಷಣೆ ಸಂಬಂಧ ಇರುವ ನಿಯಮಾವಳಿಗಳನ್ನು ಸಡಿಲಿಕೆ ಮಾಡುವಂತೆ ಕೋರಿ ಸಿಎಂ ಕಚೇರಿಯಿಂದ ಕೇಂದ್ರದ ಕೃಷಿ ಸಚಿವಾಲಯಕ್ಕೆ ಪತ್ರ ರವಾನೆಯಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ. 12 ರಷ್ಟು ಮಳೆ ಕೊರತೆಯಾಗಿದೆ. ಕಳೆದ 10 ದಿನಗಳಲ್ಲಿ ಶೇ. 63 ರಷ್ಟು ಮಳೆ ಅಭಾವ ಸೃಷ್ಟಿಯಾಗಿದ್ದು, ತಡವಾಗಿ ಬಿತ್ತನೆ ಕಾರ್ಯ ನಡೆಸಿದ ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬರಗಾಲ ಘೋಷಣೆ ಮಾಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.