ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗಿನ ವಿರೋಧದ ನಡುವೆಯೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.
ವಿಧಾನ ಪರಿಷತ್ ಗೆ ಮೂವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಫಾರಸು ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಉಮಾಶ್ರೀ, ಎಂ.ಆರ್. ಸೀತಾರಾಮ್, ಸುಧಾಮ್ ದಾಸ್ ಅವರ ಹೆಸರನ್ನು ಫೈನಲ್ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ರಾಜ್ಯಪಾಲರು ಇದಕ್ಕೆ ಅಂಕಿತ ಹಾಕಬೇಕಿದೆ.
ಕಲಾವಿದರ ಕೋಟಾದಡಿ ಉಮಾಶ್ರೀ ಹೆಸರನ್ನು ಫೈನಲ್ ಮಾಡಲಾಗಿದೆ. ಸಮಾಜ ಸೇವೆ ಕೋಟಾದಡಿ ಸುಧಾಮ ದಾಸ್, ಶಿಕ್ಷಣ ಕ್ಷೇತ್ರ ಕೋಟಾದಡಿ ಸೀತಾರಾಮ್ ಅವರಿಗೆ ಸ್ಥಾನ ನೀಡಲಾಗಿದೆ ಎಂದು ಹೇಳಲಾಗಿದೆ.