
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ. ಎಟಿಎಂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಇದೆ, ಈ ಸರ್ಕಾರ ಬಹಳ ದಿನ ಇರಲ್ಲ. ಕಮಿಷನ್ ಸರ್ಕಾರ, ಎಟಿಎಂ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತದೆ. ಮಂಡ್ಯದಲ್ಲಿ ಈಗಾಗಲೇ ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆ. ಇದು ಭ್ರಷ್ಟ ಸರ್ಕಾರ ಬಹಳ ದಿನ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಒಡೆದು ಆಳುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ಪ್ರಧಾನಿ ಮೋದಿಯವರು ದೇಶವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ಕಾಶ್ಮೀರದ ಒಂದಿಂಚು ಕೂಡ ಕೊಡುವ ಪ್ರಶ್ನೆ ಇಲ್ಲ ಎಂಬ ಸಂದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.