ರಾಯಚೂರು : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನವಾಗುವುದು ನಿಶ್ಚಿತ, ಕಾಂಗ್ರೆಸ್ ನಲ್ಲಿ ಒಳಜಗಳ ಹೆಚ್ಚಾಗಿ ಸರ್ಕಾರ ಬೀಳುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಇರಲಿಲ್ಲ. ಗ್ಯಾರಂಟಿ ಅಂತ ಹೇಳಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಡಿ.ಕೆ. ಶಿವಕುಮಾರ್ ಪ್ರಕರಣ ಬಂದಿದೆ. ಸತೀಶ್ ಜಾರಕಿಹೊಳಿ ಎಷ್ಟು ಜನರನ್ನು ಕರೆದುಕೊಂಡು ಹೋಗುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದರು.