
ಬೆಂಗಳೂರು : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರಲ್ಲ, ನನ್ನ ಸರ್ಕಾರವನ್ನು ತೆಗೆದಂತೆ ಕಾಂಗ್ರೆಸ್ ಸರ್ಕಾರವನ್ನೂ ತೆಗೆಯಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರಲ್ಲ. ನಾನು ಮುಸ್ಲಿಂ ಸಮಾಜವನ್ನೇ ನಂಬಿಕೊಂಡು ಕೂತಿಲ್ಲ. ಮುಸ್ಲಿಂ ಸಮುದಾಯವನ್ನು ನೆಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ. ಕರ್ನಾಟಕದ ಆರೂವರೆ ಕೋಟಿ ಜನರ ಪ್ರತಿನಿಧಿಯಾಗಿ ಜೆಡಿಎಸ್ ಪಕ್ಷವಿದೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಹಲವು ಮುಸ್ಲಿಂ ಮುಖಂಡರು ಜೆಡಿಎಸ್ ಗೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದರೂ ರಾಜೀನಾಮೆ ಕೊಡಲಿ, ಹೋಗುವವರು ಹೋಗಲಿ. ನಾನು ಯಾವುದೇ ಒಂದು ಸಮಾಜದ ಪ್ರತಿನಿಧಿಯಲ್ಲ. ನಮ್ಮ ಸಮಾಜ, ಒಕ್ಕಲಿಗ ಸಮಾಜ ನನಗೆ ಬೆಂಬಲ ಕೊಟ್ಟಿರಬಹುದು. ಹಾಗೆಂದು ನಾನು ಅದೊಂದು ಸಮಾಜದ ಪ್ರತಿನಿಧಿಯಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿ ಎಂದರು.