ಕಲಬುರಗಿ : ಆರೇಳು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮತ್ತೊಮ್ಮೆ ಆಪರೇಷನ್ ಕಮಲ ಮಾಡುವ ಚಿಂತನೆಯಲ್ಲಿದ್ದಾರೆ. ಆದರೆ ಕರ್ನಾಟಕದಲ್ಲಿ ಬಿಜೆಪಿಯವರ ಆಟ ನಡೆಯಲ್ಲ. ಸರ್ಕಾರ ಸುಭದ್ರವಾಗಿದೆ, ಯಾವುದೇ ಗೊಂದಲ ಇಲ್ಲ. ರಾಜಕೀಯ ಮಾಡಲು ಅವರಿಗಷ್ಟೇ ಬರುತ್ತಾ, ನಮಗೂ ಬರುತ್ತೆ. ಕಾದು ನೋಡಿ, ಬಿಜೆಪಿಯಲ್ಲಿ ಎಷ್ಟು ಜನ ಇರ್ತಾರೆ ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಆರೇಳು ತಿಂಗಳು ಕಾಯಿರಿ, ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್ ನ 25 ಕ್ಕೂ ಹೆಚ್ಚು ಶಾಸಕರು ಪಕ್ಷ ಬಿಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.