ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಕರ್ನಾಟಕ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣವಾಗಲಿದ್ದು, ಇದಕ್ಕಾಗಿ ಗುರುತಿಸಿರುವ ಜಮೀನನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ವೀಕ್ಷಣೆ ಮಾಡಿದರು.
ಗೃಹ ಮಂಡಳಿ ವತಿಯಿಂದ ಚಿಕ್ಕಜಾಲ ಮೀನುಕುಂಟೆ ಗ್ರಾಮದ 95.13 ಎಕರೆ ಪೈಕಿ 65 ಎಕರೆಯಲ್ಲಿ ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಒಳಗೊಂಡ ಟೌನ್‌ಶಿಪ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಜಮೀನು ಮಾಲೀಕರು ಹಾಗೂ ಗೃಹ ಮಂಡಳಿ ಸಹಭಾಗಿತ್ವದಲ್ಲಿ 50:50 ಅನುಪಾತದ ಒಪ್ಪಂದದಲ್ಲಿ ಯೋಜನೆ ರೂಪಿಸಲಾಗಿದೆ. 850 ಕೋಟಿ ರೂ. ವೆಚ್ಚದ ಈ ಟೌನ್‌ಶಿಪ್ ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.