alex Certify BIGG NEWS : ರಾಜ್ಯದಲ್ಲಿ `ಡೆಂಗ್ಯೂ ಜ್ವರ’ ಅಬ್ಬರ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದಲ್ಲಿ `ಡೆಂಗ್ಯೂ ಜ್ವರ’ ಅಬ್ಬರ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಡೆಂಗಿ ಜ್ವರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಡೆಂಗಿ ಜ್ವರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಾಗ್ಗೆ ಬರುತ್ತಿರುವ ಮಳೆಯಿಂದ ಹಾಗೂ ನೀರು ಸರಬರಾಜಿನ ಕೊರತೆಯಿಂದಾಗಿ ಡಂಗಿ ಪ್ರಕರಣಗಳಲ್ಲಿ ಏರಿಕೆಯನ್ನು ಗಮನಿಸಲಾಗಿದ್ದು, ಡಂಗಿ ಜ್ವರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಯಶಸ್ವಿಯಾಗುವಲ್ಲಿ ಸಮುದಾಯ / ಸಾರ್ವಜನಿಕರ ಪಾತ್ರವು ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಡಂಗಿಜ್ವರದ ಲಕ್ಷಣಗಳು, ತೀವ್ರತೆ, ಚಿಕಿತ್ಸೆ ಮತ್ತು ನಿರ್ವಹಣೆ ಹಾಗೂ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮತ್ತು ಸಾರ್ವಜನಿಕರು ಪಾಲಿಸಬೇಕಾದ ಸ್ವಯಂ ರಕ್ಷಣಾ ವಿಧಾನಗಳ (Do’s & Don’ts) ಕುರಿತು ಮಾಹಿತಿಯನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಿದೆ.

ಸದರಿ ಮಾಹಿತಿಯನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಮಾಧ್ಯಮಗಳ ಮೂಲಕ ಪ್ರಚುರಪಡಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಡಂಗಿ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರದ ಕುರಿತು ಮನವರಿಕೆ ಮಾಡಲು ತಿಳಿಸುತ್ತಾ, ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಲು ಕೋರುವಂತೆ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...