ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಯಾಗಿ ಎರಡು ತಿಂಗಳು ಕಳೆದರೂ ಇನ್ನೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿಲ್ಲ.
ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುತ್ತೇವೆ ಎಂದು ಸಾರಿಗೆ ಇಲಾಖೆ ಕೂಡ ಹೇಳಿತ್ತು. ಆದರೆ ಸದ್ಯಕ್ಕೆ ಸ್ಮಾರ್ಟ್ ಕಾರ್ಡ್ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯಾದ್ಯಂತ 5 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣಿಸಿದ್ದಾರೆ. ಯೋಜನೆ ಜಾರಿಯಾದ 3 ತಿಂಗಳೊಳಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು ಸರ್ಕಾರ ಹೇಳಿತ್ತು. ಯೋಜನೆ ಜಾರಿಯಾಗಿ 2 ತಿಂಗಳು ಕಳೆದ್ರೂ ಇನ್ನೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತಿಲ್ಲ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಚರ್ಚೆ ಆಗಿಲ್ಲ.ಈವರೆಗೆ ಏನೂ ಸಮಸ್ಯೆಯಾಗಿಲ್ಲ. ಚೆನ್ನಾಗಿ ನಡೆದುಕೊಂಡು ಹೋಗುತ್ತಿದೆ.ಸಮಸ್ಯೆಯಾದ್ರೆ ನೋಡೋಣ ಎಂದು ಹೇಳಿದ್ದಾರೆ.