ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಆಗೋದು ಗ್ಯಾರಂಟಿ, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಡಿ.ಕೆ. ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಸಿಎಂ ಆಗೊದರಲ್ಲಿ ತಪ್ಪಿಲ್ಲ ಅಂತಾ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳಿಲ್ಲ. 135 ಶಾಸಕರೂ ಸಿಎಂ ಸಿದ್ದರಾಮಯ್ಯ ಪರನೂ ಇದ್ದಾರೆ, ಡಿ.ಕೆ. ಶಿವಕುಮಾರ್ ಪರನೂ ಇದ್ದಾರೆ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡೋ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.